ಆದಿಕಾಂಡ

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50


ಅಧ್ಯಾಯ 1

1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
2 ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
3 ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
4 ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
5 ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
6 ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
7 ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
8 ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
9 ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
10 ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
11 ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
12 ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
13 ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೂರನೆಯ ದಿನವಾಯಿತು.
14 ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;
15 ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು.
16 ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
17 ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು.
18 ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
19 ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು.
20 ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.
21 ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
22 ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
23 ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.
24 ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
25 ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
26 ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
29 ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
30 ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.
31 ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
ಅಧ್ಯಾಯ 2

1 ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
2 ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
3 ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
4 ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.
5 ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.
6 ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.
7 ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
8 ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
9 ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
10 ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
11 ಮೊದಲನೆಯದರ ಹೆಸರು ಪೀಶೋನ್‌; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
12 ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
13 ಎರಡನೆಯ ನದಿಯ ಹೆಸರು ಗೀಹೋನ್‌; ಅದು ಕೂಷ್‌ ದೇಶವನ್ನೆಲ್ಲಾ ಸುತ್ತುವದು.
14 ಮೂರನೆಯ ನದಿಯ ಹೆಸರು ಹಿದ್ದೆಕೆಲ್‌; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್‌.
15 ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್‌ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
16 ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
17 ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
18 ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
19 ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
20 ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.
21 ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
22 ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
23 ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
24 ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.
25 ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
ಅಧ್ಯಾಯ 3

1 ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
2 ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.
3 ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
4 ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
5 ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
6 ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
7 ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
8 ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
9 ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
10 ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
11 ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
12 ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
13 ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
14 ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
15 ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
16 ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
17 ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
18 ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
19 ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
20 ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
21 ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
22 ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
23 ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನು.
24 ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ಅಧ್ಯಾಯ 4

1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.
2 ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
3 ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
4 ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
6 ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
7 ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
8 ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
9 ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
10 ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
11 ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
12 ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
13 ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.
14 ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
15 ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
16 ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.
17 ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
18 ಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
19 ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.
20 ಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು.
21 ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
22 ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.
23 ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.
24 ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
25 ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.
26 ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್‌ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
ಅಧ್ಯಾಯ 5

1 ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
2 ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
3 ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
4 ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
5 ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
6 ಸೇತನು ನೂರ ಐದು ವರುಷದವನಾಗಿದ್ದಾಗ ಅವನಿಂದ ಎನೋಷನು ಹುಟ್ಟಿದನು.
7 ಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
8 ಸೇತನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಹನ್ನೆರಡು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.
9 ಎನೋ ಷನು ತೊಂಭತ್ತು ವರುಷದವನಾಗಿದ್ದಾಗ ಅವನಿಂದ ಕೇನಾನನು ಹುಟ್ಟಿದನು.
10 ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
11 ಎನೋಷನ ದಿನಗಳೆಲ್ಲಾ ಒಟ್ಟು ಒಂಭೈನೂರ ಐದು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.
12 ಕೇನಾನನು ಎಪ್ಪತ್ತು ವರುಷದವನಾಗಿ ದ್ದಾಗ ಅವನಿಂದ ಮಹಲಲೇಲನು ಹುಟ್ಟಿದನು.
13 ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
14 ಕೇನಾನನ ದಿನಗಳೆಲ್ಲಾ ಒಟ್ಟು ಒಂಭೈನೂರ ಹತ್ತು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.
15 ಮಹಲಲೇಲನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಯೆರೆದನು ಹುಟ್ಟಿ ದನು.
16 ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು.
17 ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.
18 ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು.
19 ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
20 ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
21 ಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು.
22 ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
23 ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು.
24 ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
25 ಮೆತೂಷೆಲಹನು ನೂರ ಎಂಭತ್ತೇಳು ವರುಷದ ವನಾಗಿದ್ದಾಗ ಅವನಿಂದ ಲೆಮೆಕನು ಹುಟ್ಟಿದನು.
26 ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.
27 ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
28 ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.
29 ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
30 ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
31 ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.
32 ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬವರು ಹುಟ್ಟಿದರು.
ಅಧ್ಯಾಯ 6

1 ತರುವಾಯ ಭೂಮಿಯ ಮೇಲೆ ಜನರು ಹೆಚ್ಚುವದಕ್ಕೆ ಆರಂಭಿಸಿದಾಗ ಅವರಿಗೆ ಕುಮಾರ್ತೆಯರು ಹುಟ್ಟಿದರು.
2 ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
3 ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
4 ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
5 ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
6 ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
7 ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
8 ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
9 ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
10 ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬ ಮೂವರು ಕುಮಾರರು ಹುಟ್ಟಿದರು.
11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
12 ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.
13 ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
14 ನೀನು ಗೋಫೆರ್‌ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
15 ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು.
16 ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.
17 ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
18 ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
19 ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
20 ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
21 ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.
22 ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
ಅಧ್ಯಾಯ 7

1 ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
2 ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.
3 ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.
4 ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
5 ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.
6 ಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು.
7 ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.
8 ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ
9 ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
10 ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
11 ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
12 ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
13 ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್‌ ಹಾಮ್‌ ಯೆಫೆತ್‌ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
14 ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
15 ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.
16 ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
17 ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
18 ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು.
19 ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.
20 ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.
21 ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
22 ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
23 ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.
24 ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
ಅಧ್ಯಾಯ 8

1 ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
2 ಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು.
3 ಹೀಗೆ ಭೂಮಿಯ ಮೇಲಿದ್ದ ಜಲವು ಕ್ರಮವಾಗಿ ತಗ್ಗಿಹೋಯಿತು. ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆ ಯಾಯಿತು.
4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್‌ ಬೆಟ್ಟಗಳ ಮೇಲೆ ನೆಲೆಸಿತ್ತು.
5 ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.
6 ನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು
7 ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.
8 ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು.
9 ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.
10 ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು.
11 ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.
12 ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
13 ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.
14 ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
15 ಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
16 ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.
17 ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
18 ಆಗ ನೋಹನ ಸಂಗಡ ಅವನ ಹೆಂಡತಿ ಕುಮಾರರು ಸೊಸೆಯರು ಹೊರಗೆ ಬಂದರು.
19 ಎಲ್ಲಾ ಮೃಗಗಳೂ ಕ್ರಿಮಿಗಳೂ ಪಕ್ಷಿಗಳೂ ಭೂಮಿ ಯಲ್ಲಿ ಹರಿದಾಡುವ ಎಲ್ಲವುಗಳು ತಮ್ಮತಮ್ಮ ಜಾತ್ಯಾ ನುಸಾರವಾಗಿ ನಾವೆಯೊಳಗಿಂದ ಹೊರಬಂದವು.
20 ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
21 ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.
22 ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಅಧ್ಯಾಯ 9

1 ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
2 ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
3 ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
4 ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
5 ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
6 ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
7 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
8 ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ--
9 ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ
10 ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ
11 ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
12 ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
13 ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
14 ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.
15 ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
16 ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
17 ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
18 ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್‌ ಹಾಮ್‌ ಯೆಫೆತ್‌; ಹಾಮನು ಕಾನಾನನ ತಂದೆಯು.
19 ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.
20 ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.
21 ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.
22 ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
23 ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.
24 ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು--
25 ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
26 ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
27 ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
28 ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು.
29 ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
ಅಧ್ಯಾಯ 10

1 ನೋಹನ ಕುಮಾರರಾದ ಶೇಮ್‌ ಹಾಮ್‌ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
2 ಯೆಫೆತನ ಕುಮಾರರು ಯಾರಂದರೆ, ಗೋಮೆರ್‌ ಮಾಗೋಗ್‌ ಮಾದಯ್‌ ಯಾವಾನ್‌ ತೂಬಲ್‌ ಮೇಷೆಕ್‌ ತೀರಾಸ್‌ ಎಂಬವರು.
3 ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್‌ ರೀಫತ್‌ ತೋಗರ್ಮ ಎಂಬವರು.
4 ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್‌ ಕಿತ್ತೀಮ್‌ ದೋದಾನಿಮ್‌ ಇವರೇ.
5 ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
6 ಹಾಮನ ಕುಮಾರರು ಯಾರಂದರೆ, ಕೂಷ್‌ ಮಿಚ್ರಯಿಮ್‌ ಪೂತ್‌ ಕಾನಾನ್‌ ಎಂಬವರು.
7 ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್‌ ಎಂಬವರು.
8 ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
9 ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
10 ಶಿನಾರ್‌ ದೇಶದಲ್ಲಿರುವ ಬಾಬೆಲ್‌ ಯೆರೆಕ್‌ ಅಕ್ಕದ್‌ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
11 ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್‌ ಎಂಬ ಪಟ್ಟಣ, ಕೆಲಹ,
12 ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್‌ನನ್ನು ಕಟ್ಟಿದನು.
13 ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
14 ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
15 ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
16 ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
17 ಹಿವ್ವಿಯನೂ ಅರ್ಕಿಯನೂ ಸೀನಿಯನೂ
18 ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್‌ ಕುಟುಂಬಗಳು ವಿಸ್ತಾರವಾಗಿ ಹರಡಿದವು.
19 ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್‌ ಗೊಮೋರ ಅದ್ಮಾ ಚೆಬೋಯಿಮ್‌ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
20 ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
21 ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
22 ಶೇಮನ ಮಕ್ಕಳು ಯಾರಂದರೆ, ಏಲಾಮ್‌ ಅಶ್ಶೂರ್‌ ಅರ್ಪಕ್ಷದ್‌ ಲೂದ್‌ ಅರಾಮ್‌.
23 ಅರಾಮನ ಮಕ್ಕಳು ಯಾರಂದರೆ, ಊಸ್‌ ಹೂಲ್‌ ಗೆತೆರ್‌ ಮಷ್‌ ಇವರೇ.
24 ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
25 ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್‌.
26 ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ
27 ಹದೋರಾಮನೂ ಊಜಾಲನೂ ದಿಕ್ಲಾನನೂ
28 ಓಬಾಲನೂ ಅಬೀಮಯೇಲನೂ ಶೆಬನೂ
29 ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
30 ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು.
31 ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.
32 ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
ಅಧ್ಯಾಯ 11

1 ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.
2 ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್‌ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
3 ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
4 ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
5 ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.
6 ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
7 ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.
8 ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು.
9 ಆದದರಿಂದ ಅದಕ್ಕೆ ಬಾಬೆಲ್‌ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
10 ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.
11 ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
12 ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು.
13 ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
14 ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು.
15 ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
16 ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.
17 ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
18 ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು.
19 ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
20 ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು.
21 ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
22 ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು.
23 ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
24 ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು.
25 ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
26 ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
27 ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
28 ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್‌ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು.
29 ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
30 ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು.
31 ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್‌ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್‌ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.
32 ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
ಅಧ್ಯಾಯ 12

1 ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
2 ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
3 ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
4 ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
5 ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.
6 ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
7 ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
8 ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
9 ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
10 ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
11 ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.
12 ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು.
13 ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.
14 ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು.
15 ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.
16 ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
17 ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
18 ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
19 ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.
20 ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
ಅಧ್ಯಾಯ 13

1 ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
2 ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
3 ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
4 ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
5 ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
6 ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
7 ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
8 ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
9 ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
10 ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
11 ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.
12 ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
13 ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
14 ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
15 ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
16 ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
17 ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.
18 ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
ಅಧ್ಯಾಯ 14

1 ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
2 ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
3 ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್‌ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
4 ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.
5 ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್‌ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
6 ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
7 ಅವರು ಹಿಂತಿರುಗಿ ಕಾದೇಶ್‌ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
8 ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
9 ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್‌ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.
10 ಸಿದ್ದೀಮ್‌ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್‌ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
11 ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.
12 ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
13 ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
14 ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
15 ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
16 ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
17 ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
18 ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
19 ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
20 ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
21 ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.
22 ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
23 ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.
24 ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
ಅಧ್ಯಾಯ 15

1 ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
2 ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
3 ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ
4 ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.
5 ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
6 ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
7 ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್‌ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
8 ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
9 ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.
10 ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.
11 ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.
12 ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.
13 ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
14 ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
15 ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
16 ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
17 ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
18 ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್‌ ನದಿಯ ವರೆಗೆ ವಾಸಿಸುವ
19 ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
20 ಹಿತ್ತಿಯರೂ ಪೆರಿಜೀಯರೂ ರೆಫಾಯರೂ
21 ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
ಅಧ್ಯಾಯ 16

1 ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
2 ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
3 ಅಬ್ರಾಮನು ಕಾನಾನ್‌ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
4 ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
5 ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
6 ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
7 ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
8 ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
9 ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.
10 ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
11 ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
12 ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
13 ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
14 ಆದದರಿಂದ ಆ ಬಾವಿಗೆ ಬೆರ್‌ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
15 ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.
16 ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
ಅಧ್ಯಾಯ 17

1 ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
2 ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
3 ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
4 ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ.
5 ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
6 ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
7 ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
8 ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್‌ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
9 ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
10 ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
11 ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
12 ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
13 ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
14 ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
15 ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
16 ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
17 ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
18 ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.
19 ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
20 ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
21 ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
22 ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
23 ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.
25 ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.
26 ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.
27 ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
ಅಧ್ಯಾಯ 18

1 ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
2 ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
3 ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
4 ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
5 ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
6 ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
7 ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
8 ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
9 ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
10 ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
11 ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
12 ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
13 ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
14 ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
15 ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
16 ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
17 ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?
18 ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
19 ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
20 ಕರ್ತನು--ಸೊದೋಮ್‌ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
21 ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
22 ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
23 ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
24 ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
25 ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
26 ಅದಕ್ಕೆ ಕರ್ತನು--ನನಗೆ ಸೊದೋಮ್‌ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
27 ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
28 ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
29 ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
30 ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
31 ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
32 ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.
33 ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
ಅಧ್ಯಾಯ 19

1 ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್‌ಗೆ ಬಂದಾಗ ಲೋಟನು ಸೊದೋ ಮ್‌ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
2 ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
3 ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
4 ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್‌ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
5 ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
6 ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--
7 ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.
8 ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
9 ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
10 ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.
11 ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
12 ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
13 ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
14 ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
15 ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
16 ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
17 ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
18 ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ,
19 ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
20 ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
21 ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
22 ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್‌ ಎಂದು ಹೆಸರಾಯಿತು.
23 ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.
24 ಆಗ ಕರ್ತನು ಸೊದೋಮ್‌ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
25 ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
26 ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
27 ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು
28 ಸೊದೋಮ್‌ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
29 ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
30 ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
31 ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.
32 ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
33 ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
34 ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
35 ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
36 ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
37 ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್‌ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.
38 ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
ಅಧ್ಯಾಯ 20

1 ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
2 ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
3 ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
4 ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
5 ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
6 ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
7 ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
8 ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.
9 ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
10 ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ
11 ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
12 ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು.
13 ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
14 ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.
15 ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
16 ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.
17 ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.
18 ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
ಅಧ್ಯಾಯ 21

1 ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.
2 ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
3 ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
4 ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
5 ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
6 ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
7 ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
8 ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
9 ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
10 ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
11 ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
12 ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
13 ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
14 ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
15 ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
16 ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
17 ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
18 ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
19 ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
20 ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
21 ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
22 ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
23 ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
24 ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
25 ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
26 ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
27 ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
28 ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
29 ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
30 ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
31 ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
32 ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
33 ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
ಅಧ್ಯಾಯ 22

1 ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
2 ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
3 ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
4 ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.
5 ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.
6 ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.
7 ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.
8 ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
9 ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
10 ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.
11 ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
12 ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
13 ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
14 ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
15 ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
16 ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
17 ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
18 ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
19 ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
20 ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.
21 ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,
22 ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು;
23 ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.
24 ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
ಅಧ್ಯಾಯ 23

1 ಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ.
2 ಸಾರಳು ಕಾನಾನ್‌ ದೇಶದಲ್ಲಿರುವ ಹೆಬ್ರೋನ್‌ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
3 ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
4 ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
5 ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
6 ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
7 ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
8 ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
9 ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
10 ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
11 ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
12 ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.
13 ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
14 ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--
15 ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್‌ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
16 ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
18 ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್‌ ದೇಶದಲ್ಲಿ ಹೆಬ್ರೋನ್‌ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.
20 ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
ಅಧ್ಯಾಯ 24

1 ಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು.
2 ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
3 ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
4 ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
5 ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.
6 ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು.
7 ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
8 ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
9 ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
10 ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
11 ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.
12 ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
13 ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.
14 ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
15 ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
16 ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು.
17 ಆಗ ಆ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು.
18 ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು.
19 ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.
20 ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.
21 ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.
22 ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್‌ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್‌ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
23 ಅವನು--ನೀನು ಯಾರ ಮಗಳು? ನನಗೆ ಹೇಳು; ನಿನ್ನ ತಂದೆಯ ಮನೆಯಲ್ಲಿ ಇಳುಕೊಳ್ಳುವದಕ್ಕೆ ನಮಗೆ ಸ್ಥಳವಿದೆಯೋ ಅಂದನು.
24 ಅದಕ್ಕೆ ಆಕೆಯು ನಾನು ನಾಹೋರನಿಗೆ ಮಿಲ್ಕಳು ಹೆತ್ತ ಬೆತೂವೇಲನ ಮಗಳು ಅಂದಳು.
25 ಇದಲ್ಲದೆ ಆಕೆಯು ಅವನಿಗೆ--ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ; ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು.
26 ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--
27 ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
28 ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.
29 ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
30 ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.
31 ಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು.
32 ಆಗ ಆ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.
33 ಅವನಿಗೆ ಊಟ ಬಡಿಸಿದಾಗ ಅವನು--ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವದಿಲ್ಲ ಅಂದನು. ಅದಕ್ಕೆ ಲಾಬಾ ನನು--ಹೇಳು ಅಂದನು.
34 ಅವನು--ನಾನು ಅಬ್ರಹಾಮನ ಸೇವಕನು.
35 ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
36 ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
37 ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
38 ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
39 ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ
40 ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;
41 ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
42 ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
43 ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
44 ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.
45 ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
46 ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
47 ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
48 ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
49 ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
50 ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
51 ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
52 ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
53 ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
54 ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
55 ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
56 ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
57 ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು.
58 ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.
59 ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
60 ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
61 ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
62 ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
63 ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.
64 ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು.
65 ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
66 ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.
67 ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
ಅಧ್ಯಾಯ 25

1 ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.
2 ಆಕೆಯು ಅವನಿಗೆ ಜಿಮ್ರಾನ್‌ ಯೊಕ್ಷಾನ್‌ ಮೆದಾನ್‌ ಮಿದ್ಯಾನ್‌ ಇಷ್ಬಾಕ್‌ ಶೂಹ ಎಂಬವರನ್ನು ಹೆತ್ತಳು.
3 ಯೊಕ್ಷಾನನಿಂದ ಶೆಬಾ ದೆದಾನ್‌ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
4 ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
5 ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
6 ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
7 ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
8 ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
9 ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
10 ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.
11 ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
12 ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
13 ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್‌ ಕೇದಾರ್‌ ಅದ್ಬಯೇಲ್‌ ಮಿಬ್ಸಾಮ್‌
14 ಮಿಷ್ಮಾ ದೂಮಾ ಮಸ್ಸಾ
15 ಹದದ್‌ ತೇಮಾ ಯಟೂರ್‌ ನಾಫೀಷ್‌ ಕೇದ್ಮಾ.
16 ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
17 ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
18 ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
19 ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು.
20 ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್‌ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
21 ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
22 ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
23 ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
24 ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.
25 ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು.
26 ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
27 ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
28 ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
29 ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು.
30 ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್‌ ಎಂದು ಹೆಸರಾಯಿತು.
31 ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು.
32 ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.
33 ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.
34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
ಅಧ್ಯಾಯ 26

1 ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
2 ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
3 ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
4 ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
5 ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.
6 ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
7 ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
8 ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
9 ಆಗ ಅಬೀಮೆಲೆಕನು ಇಸಾಕ ನನ್ನು ಕರೆದು--ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು--ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ--ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು.
10 ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
11 ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
12 ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
13 ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.
14 ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
15 ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.
16 ಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು.
17 ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು.
18 ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.
19 ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.
20 ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್‌ ಎಂದು ಹೆಸರಿಟ್ಟನು.
21 ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
22 ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್‌ ಎಂದು ಹೆಸರಿಟ್ಟನು.
23 ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.
24 ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
25 ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
26 ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.
27 ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.
28 ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
29 ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
30 ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
32 ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
33 ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
34 ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.
35 ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
ಅಧ್ಯಾಯ 27

1 ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
2 ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.
3 ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
4 ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
5 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.
6 ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ--
7 ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;
8 ಆದದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.
9 ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು.
10 ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು.
11 ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕ ಳಿಗೆ--ಇಗೋ, ನನ್ನ ಸಹೋದರನಾದ ಏಸಾವನು ರೋಮವುಳ್ಳ ಮನುಷ್ಯನಾಗಿದ್ದಾನೆ. ನಾನು ನುಣು ಪಾದ ಮನುಷ್ಯನಾಗಿದ್ದೇನೆ.
12 ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು.
13 ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
14 ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.
15 ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.
16 ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು;
17 ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
18 ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.
19 ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
20 ಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.
21 ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
22 ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
23 ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
24 ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.
25 ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
26 ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.
27 ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ.
28 ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
29 ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
30 ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು.
31 ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
32 ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು.
33 ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
34 ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
35 ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.
36 ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
37 ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
38 ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
39 ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
40 ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
41 ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
42 ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.
43 ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
44 ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು.
45 ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.
46 ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
ಅಧ್ಯಾಯ 28

1 ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
2 ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್‌ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
5 ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
6 ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್‌ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
7 ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್‌ ಅರಾಮಿಗೆ ಹೋದದ್ದನ್ನೂ
8 ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
9 ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್‌ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
10 ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
11 ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
12 ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
13 ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
14 ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
15 ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
16 ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
17 ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
18 ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
19 ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್‌ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್‌ ಎಂದು ಹೆಸರಿತ್ತು.
20 ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
21 ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.
22 ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ಅಧ್ಯಾಯ 29

1 ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
2 ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
3 ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
4 ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
5 ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.
6 ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
7 ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.
8 ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.
9 ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
10 ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
11 ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
12 ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
13 ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
14 ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
15 ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
16 ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.
17 ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.
18 ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
19 ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.
20 ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
21 ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
22 ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
23 ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.
24 ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
25 ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
26 ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
27 ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
28 ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.
29 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.
30 ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
31 ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
32 ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.
33 ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
34 ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.
35 ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
ಅಧ್ಯಾಯ 30

1 ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
2 ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
3 ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
4 ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
5 ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.
6 ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್‌ ಎಂದು ಹೆಸರಿಟ್ಟಳು.
7 ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
8 ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
9 ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
10 ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
11 ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್‌ ಎಂದು ಹೆಸರಿಟ್ಟಳು.
12 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
13 ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್‌ ಎಂದು ಹೆಸರಿಟ್ಟಳು.
14 ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
15 ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
16 ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
17 ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
18 ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
19 ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
20 ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್‌ ಎಂದು ಹೆಸರಿಟ್ಟಳು.
21 ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
22 ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
23 ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
24 ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
25 ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
26 ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
27 ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
28 ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
29 ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
30 ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
31 ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
32 ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
34 ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
35 ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
36 ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
37 ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್‌ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
38 ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ
39 ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
40 ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.
41 ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.
42 ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.
43 ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
ಅಧ್ಯಾಯ 31

1 ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
2 ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.
3 ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
4 ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ
5 ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
6 ನಾನು ಪೂರ್ಣ ಬಲದಿಂದ ನಿಮ್ಮ ತಂದೆಯ ಸೇವೆಮಾಡಿದ್ದು ನಿಮಗೆ ತಿಳಿದಿದೆ.
7 ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
8 ನಿಮ್ಮ ತಂದೆ ನನಗೆ --ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು --ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.
9 ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.
10 ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
11 ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
12 ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.
13 ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
14 ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ?
15 ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
16 ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು.
17 ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ
18 ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್‌ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್‌ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
19 ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
20 ಆದರೆ ಯಾಕೋಬನು ತಾನು ಓಡಿ ಹೋಗುವದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಕಳ್ಳತನದಿಂದ ಹೋದನು.
21 ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್‌ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.
22 ಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು.
23 ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್‌ ಪರ್ವತದಲ್ಲಿ ಅವನನ್ನು ಸಂಧಿಸಿದನು.
24 ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
25 ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹೋದರರ ಸಂಗಡ ಗಿಲ್ಯಾದ್‌ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.
26 ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.
27 ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
28 ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.
29 ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
30 ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
31 ಅದಕ್ಕೆ ಯಾಕೋಬನು ಪ್ರತ್ಯುತ್ತರವಾಗಿ ಲಾಬಾನ ನಿಗೆ--ನೀನು ಒಂದು ವೇಳೆ ನಿನ್ನ ಕುಮಾರ್ತೆಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತಕ್ಕೊಳ್ಳುವಿ ಎಂದು ನಾನು ಅಂದುಕೊಂಡು ಭಯಪಟ್ಟೆನು.
32 ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
33 ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.
34 ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.
35 ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ಆ ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು.
36 ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?
37 ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
38 ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
39 ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.
40 ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
41 ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
42 ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
43 ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?
44 ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.
45 ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು;
46 ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು.
47 ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್‌ ಎಂದೂ ಹೆಸರಿಟ್ಟನು;
48 ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್‌ ಎಂದೂ
49 ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.
50 ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
51 ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು.
52 ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
53 ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
54 ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.
55 ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಅಧ್ಯಾಯ 32

1 ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
2 ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್‌ ಎಂದು ಹೆಸರಿಟ್ಟನು.
3 ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
4 ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
5 ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
6 ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
7 ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
8 ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
9 ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
10 ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್‌ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
11 ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
12 ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
13 ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
14 ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;
15 ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು;
16 ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.
17 ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ
18 ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
19 ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
20 ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.
22 ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್‌ ಎಂಬ ಸ್ಥಳದಲ್ಲಿ ದಾಟಿದನು.
23 ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
24 ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
25 ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
26 ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
27 ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು.
28 ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
29 ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
30 ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್‌ ಎಂದು ಹೆಸರಿಟ್ಟನು.
31 ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.
32 ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್‌ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
ಅಧ್ಯಾಯ 33

1 ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.
2 ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.
3 ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.
4 ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
5 ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
6 ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
7 ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
8 ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
9 ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
10 ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
11 ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
12 ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು.
13 ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
14 ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
15 ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
16 ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
17 ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್‌ ಎಂದು ಹೆಸರಾಯಿತು.
18 ಯಾಕೋಬನು ಪದ್ದನ್‌ ಅರಾಮಿನಿಂದ ಬಂದು ಕಾನಾನ್‌ ದೇಶದ ಶೆಕೆಮಿನಲ್ಲಿರುವ ಸಾಲೆಮ್‌ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
19 ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.
20 ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್‌ ಎಂದು ಹೆಸರಿಟ್ಟನು.
ಅಧ್ಯಾಯ 34

1 ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.
2 ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
3 ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.
4 ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
5 ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
6 ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು.
7 ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
8 ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;
9 ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.
10 ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
11 ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು.
12 ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
13 ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.
14 ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
15 ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
16 ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;
17 ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು.
18 ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
20 ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--
21 ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
22 ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.
23 ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
24 ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
25 ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
26 ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.
27 ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
28 ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.
29 ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.
30 ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.
31 ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
ಅಧ್ಯಾಯ 35

1 ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
3 ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
4 ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
5 ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
6 ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್‌ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್‌.
7 ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್‌ ಬೇತೇಲ್‌ ಎಂದು ಹೆಸರಿಟ್ಟನು.
8 ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್‌ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್‌ ಬಾಕೂತ್‌ ಎಂದು ಹೆಸರಾಯಿತು.
9 ಯಾಕೋಬನು ಪದ್ದನ್‌ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
10 ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್‌ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್‌ ಎಂದು ಹೆಸರಿಟ್ಟನು.
11 ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
12 ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
13 ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.
14 ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
15 ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್‌ ಎಂದು ಹೆಸರಿಟ್ಟನು.
16 ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
17 ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.
18 (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್‌ ಎಂದು ಹೆಸರಿಟ್ಟನು.
19 ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್‌.
20 ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
21 ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್‌ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
23 ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
24 ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.
25 ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
26 ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್‌ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
27 ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್‌ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
28 ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.
29 ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
ಅಧ್ಯಾಯ 36

1 ಎದೋಮ್‌ ಎಂಬ ಏಸಾವನ ವಂಶಾವಳಿಗಳು ಇವೇ:
2 ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
3 ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್‌ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
4 ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
5 ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್‌ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
6 ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್‌ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
7 ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
8 ಹೀಗೆ ಏಸಾವನು ಸೇಯಾರ್‌ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
9 ಸೇಯಾರ್‌ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
10 ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.
11 ಎಲೀಫಜನ ಮಕ್ಕಳು ಯಾರಂದರೆ: ತೇಮಾನ್‌ ಓಮಾರ್‌ ಚೆಫೋ ಗತಾಮ್‌ ಕೆನಜ್‌;
12 ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
13 ರೆಗೂವೇಲನ ಮಕ್ಕಳು ಯಾರಂದರೆ: ನಹತ್‌ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
14 ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
15 ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್‌ ಓಮಾರ್‌ ಚೆಫೋ ಕೆನಜ್‌
16 ಕೋರಹ ಗತಾಮ್‌ ಅಮಾಲೇಕ್‌ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು.
17 ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್‌, ಜೆರಹ, ಶಮ್ಮಾ, ಮಿಜ್ಜಾ; ಎದೋಮ್‌ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
18 ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
19 ಇವರು ಎದೋಮ್‌ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು.
20 ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್‌ ಶೋಬಾಲ್‌ ಸಿಬೆಯೋನ್‌ ಅನಾಹ
21 ದೀಶೋನ್‌ ಏಚೆರ್‌ ದೀಶಾನ್‌ ಇವರು ಎದೋಮ್‌ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು.
22 ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್‌ ಲೋಟಾನನ ಸಹೋದರಿ ಯಾದ ತಿಮ್ನಾ.
23 ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್‌ ಮಾನಹತ್‌ ಗೇಬಾಲ್‌ ಶೆಫೋ ಮತ್ತು ಓನಾಮ್‌.
24 ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
25 ಅನಾಹನ ಮಕ್ಕಳು ಯಾರಂದರೆ: ದೀಶೋನ್‌ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
26 ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್‌ ಎಷ್ಬಾನ್‌ ಇತ್ರಾನ್‌ ಕೆರಾನ್‌.
27 ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್‌ ಜಾವಾನ್‌ ಆಕಾನ್‌.
28 ದೀಶಾನನ ಮಕ್ಕಳು ಯಾರಂದರೆ: ಊಚ್‌ ಅರಾನ್‌.
29 ಹೋರಿಯರಿಂದ ಬಂದ ಮುಖಂಡರು ಯಾರಂದರೆ: ಲೋಟಾನ್‌ ಶೋಬಾಲ್‌ ಸಿಬೆಯೋನ್‌ ಅನಾಹ.
30 ದೀಶೋನ್‌ ಏಚೆರ್‌ ದೀಶಾನ್‌ ಇವರೇ. ಇವರು ಸೇಯಾರ್‌ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು.
31 ಇಸ್ರಾಯೇಲ್‌ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್‌ ದೇಶದಲ್ಲಿ ಆಳಿದ ಅರಸರು ಇವರೇ.
32 ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು; ಅವನ ಪಟ್ಟಣದ ಹೆಸರು ದಿನ್ಹಾಬಾ.
33 ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು.
34 ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು.
35 ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್‌.
36 ಹದದನು ಸತ್ತಾಗ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು.
37 ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು.
38 ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು.
39 ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್‌; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
40 ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ.
41 ಒಹೋಲೀಬಾಮ ಏಲಾ ಪೀನೋನ್‌.
42 ಕೆನಜ್‌ ತೇಮಾನ್‌ ಮಿಪ್ಚಾರ
43 ಮಗ್ದೀಯೇಲ್‌ ಗೀರಾಮ್‌. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
ಅಧ್ಯಾಯ 37

1 ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್‌ ದೇಶದಲ್ಲಿ ವಾಸ ವಾಗಿದ್ದನು.
2 ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
3 ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
4 ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
5 ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
6 ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.
7 ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
8 ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
9 ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
10 ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
11 ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
12 ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.
13 ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
14 ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
15 ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.
16 ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.
17 ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
18 ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
19 ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ;
20 ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
21 ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.
22 ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.
23 ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.
24 ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು.
25 ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
26 ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
27 ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
28 ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
29 ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
30 ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
31 ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ
32 ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
33 ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
34 ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
35 ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.
36 ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ಅಧ್ಯಾಯ 38

1 ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.
2 ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು.
3 ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು.
4 ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು.
5 ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.
6 ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್‌.
7 ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
8 ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
9 ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.
10 ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
11 ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
13 ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
14 ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
15 ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.
16 ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.
17 ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು.
18 ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
19 ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
20 ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
21 ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.
22 ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.
23 ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.
24 ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
25 ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.
26 ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
27 ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.
28 ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು.
29 ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.
30 ಹೀಗೆ ಅವನಿಗೆ ಪೆರೆಚ್‌ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
ಅಧ್ಯಾಯ 39

1 ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
2 ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
3 ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
4 ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
5 ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
6 ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
7 ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
8 ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
9 ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
10 ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
11 ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
12 ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
13 ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು
14 ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
15 ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು.
16 ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
17 ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು;
18 ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು.
19 ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು.
20 ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
21 ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
22 ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.
23 ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
ಅಧ್ಯಾಯ 40

1 ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
2 ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು
3 ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
4 ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
5 ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
6 ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
7 ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
8 ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
9 ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
10 ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
11 ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
12 ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
13 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
15 ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
16 ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
17 ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
18 ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.
19 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
20 ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
21 ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.
22 ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.
23 ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
ಅಧ್ಯಾಯ 41

1 ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
2 ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
3 ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.
4 ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.
5 ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.
6 ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.
7 ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.
8 ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
9 ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;
10 ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ
11 ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
12 ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
13 ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
14 ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
15 ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
16 ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
17 ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
18 ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
19 ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.
20 ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು;
21 ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
22 ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.
23 ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
24 ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
25 ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
26 ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.
27 ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.
28 ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.
29 ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.
30 ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
31 ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
32 ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
33 ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
34 ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.
35 ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
36 ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
37 ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.
38 ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
39 ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
40 ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
41 ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
42 ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
43 ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
44 ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
45 ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್‌ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
46 ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
47 ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
48 ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
49 ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.
50 ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್‌ ಅವರನ್ನು ಯೋಸೇಫನಿಗೆ ಹೆತ್ತಳು.
51 ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
52 ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್‌ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
53 ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ
54 ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
55 ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
56 ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.
57 ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
ಅಧ್ಯಾಯ 42

1 ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
2 ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
3 ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.
4 ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
5 ಕಾನಾನ್‌ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
6 ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
7 ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್‌ ದೇಶದಿಂದ ಬಂದೆವು ಅಂದರು.
8 ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
9 ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
10 ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
11 ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
12 ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
13 ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್‌ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
14 ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ.
15 ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
16 ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
17 ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
18 ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
19 ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.
20 ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
21 ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
22 ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
23 ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.
24 ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
25 ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು.
26 ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಅಲ್ಲಿಂದ ಹೋಗಿಬಿಟ್ಟರು.
27 ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.
28 ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.
29 ಅವರು ಕಾನಾನ್‌ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ--
30 ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
31 ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ.
32 ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್‌ ದೇಶದಲ್ಲಿ ಇದ್ದಾನೆ ಅಂದೆವು.
33 ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
34 ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
35 ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
36 ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
37 ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.
38 ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
ಅಧ್ಯಾಯ 43

1 ದೇಶದಲ್ಲಿ ಬರವು ಘೋರವಾಗಿತ್ತು.
2 ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
3 ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
4 ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.
5 ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.
6 ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ
7 ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.
8 ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
9 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
10 ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.
11 ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
13 ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.
14 ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
15 ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
16 ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
17 ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.
18 ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
19 ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--
20 ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.
21 ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
22 ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.
23 ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
24 ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
25 ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
26 ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
27 ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
28 ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
29 ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
30 ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
31 ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.
32 ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
33 ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.
34 ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
ಅಧ್ಯಾಯ 44

1 ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
2 ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.
3 ಬೆಳಿಗ್ಗೆ ಹೊತ್ತು ಮೂಡಿದಾಗ ಆ ಮನುಷ್ಯರು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲ್ಪಟ್ಟರು.
4 ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
5 ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.
6 ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.
7 ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.
8 ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್‌ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
9 ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
10 ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.
11 ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
12 ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.
13 ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.
14 ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
15 ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
16 ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
17 ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
18 ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
19 ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು
20 ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
21 ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,
22 ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
23 ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
24 ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.
25 ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.
26 ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
27 ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
28 ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.
29 (ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.
30 ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
31 ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
32 ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
33 ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.
34 ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
ಅಧ್ಯಾಯ 45

1 ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
2 ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
3 ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
4 ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ.
5 ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
6 ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
7 ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
8 ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
9 ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
10 ಗೋಷೆನ್‌ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
11 ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
12 ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.
13 ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
14 ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
15 ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
16 ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
17 ಫರೋಹನು ಯೋಸೇಫ ನಿಗೆ--ನಿನ್ನ ಸಹೋದರರಿಗೆ--ನೀವು ಹೀಗೆ ಮಾಡಿರಿ; ನಿಮ್ಮ ಪಶುಗಳ ಮೇಲೆ ಸಾಮಾಗ್ರಿಗಳನ್ನು ಹೇರಿ ಕಾನಾನ್‌ ದೇಶಕ್ಕೆ ಹೋಗಿ
18 ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
19 ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
20 ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
21 ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
22 ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
23 ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.
24 ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
25 ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--
26 ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
27 ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.
28 ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
ಅಧ್ಯಾಯ 46

1 ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
2 ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
3 ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
4 ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
5 ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
6 ಅವರು ತಮ್ಮ ದನಗಳನ್ನೂ ಕಾನಾನ್‌ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
7 ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
8 ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
9 ರೂಬೇನನ ಕುಮಾರರು: ಹನೋಕ್‌ ಫಲ್ಲೂ ಹೆಚ್ರೋನ್‌ ಕರ್ಮಿ ಎಂಬವರು.
10 ಸಿಮೆಯೋನನ ಮಕ್ಕಳು: ಯೆಮೂವೇಲ್‌ ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಕಾನಾನ್ಯಳ ಮಗನಾದ ಸೌಲ ಎಂಬವರು.
11 ಲೇವಿಯ ಮಕ್ಕಳು: ಗೆರ್ಷೋನ್‌ ಕೆಹಾತ್‌ ಮೆರಾರೀ ಎಂಬವರು.
12 ಯೆಹೂದನ ಮಕ್ಕಳು: ಏರ್‌ ಓನಾನ್‌ ಶೇಲಾಹ ಪೆರೆಚ್‌ ಜೆರಹ. ಆದರೆ ಏರನೂ ಓನಾನನೂ ಕಾನಾನ್‌ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್‌ ಹಾಮೂಲ್‌ ಎಂಬವರು.
13 ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್‌ ಶಿಮ್ರೋನ್‌ ಎಂಬವರು.
14 ಜೆಬು ಲೂನನ ಮಕ್ಕಳು: ಸೆರೆದ್‌ ಏಲೋನ್‌ ಯಹ್ಲೇಲ್‌ ಎಂಬವರು.
15 ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್‌ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
16 ಗಾದನ ಮಕ್ಕಳು: ಚಿಪ್ಯೋನ್‌ ಹಗ್ಗೀ ಶೂನೀ ಎಚ್ಬೋನ್‌ ಏರೀ ಅರೋದೀ ಅರೇಲೀ ಎಂಬವರು.
17 ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್‌ ಮಲ್ಕಿಯೇಲ್‌ ಎಂಬ ವರು.
18 ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
19 ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್‌ ಬೆನ್ಯಾವಿಾನ್‌ ಎಂಬವರು.
20 ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
21 ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್‌ ಅಶ್ಬೇಲ್‌ ಗೇರಾ ನಾಮಾನ್‌ ಏಹೀರೋಷ್‌ ಮುಪ್ಪೀಮ್‌ ಹುಪ್ಪೀಮ್‌ ಆರ್ದ ಎಂಬವರು.
22 ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ.
23 ದಾನನ ಮಗನು ಹುಶೀಮನು.
24 ನಫ್ತಾ ಲಿಯ ಕುಮಾರರು: ಯಹೇಲ್‌ ಗೂನೀ ಯೇಚೆರ್‌ ಶಿಲ್ಲೇಮ್‌ ಎಂಬವರು.
25 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ.
26 ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
27 ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
28 ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್‌ ದೇಶಕ್ಕೆ ಬಂದರು.
29 ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
30 ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
31 ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
32 ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
33 ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.
34 ಗೋಷೆನ್‌ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
ಅಧ್ಯಾಯ 47

1 ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್‌ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್‌ ಸೀಮೆಯಲ್ಲಿ ಇದ್ದಾರೆ ಅಂದನು.
2 ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.
3 ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
4 ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್‌ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್‌ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
5 ಅದಕ್ಕೆ ಫರೋಹನು ಯೋಸೇಫನಿಗೆ--ನಿನ್ನ ತಂದೆಯೂ ನಿನ್ನ ಸಹೋದ ರರೂ ನಿನ್ನ ಬಳಿಗೆ ಬಂದಿದ್ದಾರೆ.
6 ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್‌ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
7 ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
8 ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ
9 ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
10 ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
11 ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್‌ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
12 ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
13 ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್‌ದೇಶವೂ ಕ್ಷಾಮದಿಂದ ಕ್ಷೀಣವಾದವು.
14 ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.
15 ಐಗುಪ್ತ ದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
16 ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು.
17 ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.
18 ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.
19 ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.
20 ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು
21 ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.
22 ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
23 ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
24 ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
25 ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
26 ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
27 ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್‌ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.
28 ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
29 ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
30 ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.
31 ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
ಅಧ್ಯಾಯ 48

1 ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
2 ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.
3 ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
4 ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
5 ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್‌ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್‌ ಸಿಮೆಯೋನ್‌ ಇವ ರಂತೆ ನನ್ನವರಾಗಿರಬೇಕು.
6 ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ.
7 ನಾನು ಪದ್ದನ್‌ ಅರಾಮಿನಿಂದ ಬಂದಾಗ ಕಾನಾನ್‌ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು.
8 ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು.
9 ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.
10 ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
11 ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
12 ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
14 ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
15 ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
16 ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್‌ ಇಸಾಕ್‌ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
17 ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
18 ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
19 ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
20 ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್‌ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್‌ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
21 ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.
22 ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
ಅಧ್ಯಾಯ 49

1 ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
2 ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.
3 ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
4 ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
5 ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
6 ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
8 ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
9 ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
10 ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
11 ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
12 ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
13 ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
14 ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
15 ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
16 ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
17 ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
18 ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
19 ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
20 ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
21 ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
22 ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
23 ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
24 ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
25 ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
26 ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
27 ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
28 ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
29 ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
30 ಕಾನಾನ್‌ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
31 ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
32 ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.
33 ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
ಅಧ್ಯಾಯ 50

1 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
2 ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
3 ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
4 ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
5 ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್‌ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
6 ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
7 ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
8 ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್‌ ಸೀಮೆಯಲ್ಲಿ ಬಿಟ್ಟರು.
9 ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
10 ಅವರು ಯೊರ್ದನಿನ ಆಚೆ ಇರುವ ಆಟಾದ್‌ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
11 ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
12 ಆಗ ಯಾಕೋಬನು ತನ್ನ ಕುಮಾರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.
13 ಅವನ ಕುಮಾರರು ಅವನನ್ನು ಕಾನಾನ್‌ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
14 ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು.
15 ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
16 ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ
17 ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
18 ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
19 ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
20 ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
21 ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
22 ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
23 ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
24 ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
25 ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.
26 ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.