ರೋಮಾಪುರದವರಿಗೆ

1 2 3 4 5 6 7 8 9 10 11 12 13 14 15 16


ಅಧ್ಯಾಯ 1

1 ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
2 (ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
3 ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
4 ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
5 ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
6 ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
7 ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
8 ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
9 ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
10 ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
11 ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
12 ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
13 ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
14 ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
15 ಹೀಗೆ ನಾನಾದರೋ ರೋಮ್‌ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
16 ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
17 ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
18 ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
19 ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
20 ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
21 ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
22 ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
23 ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
24 ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
25 ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್‌.
26 ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
27 ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
28 ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
29 ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
30 ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
31 ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.
32 ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
ಅಧ್ಯಾಯ 2

1 ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
2 ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.
3 ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
4 ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
5 ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
6 ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
7 ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
8 ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
9 ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
10 ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
11 ದೇವರಲ್ಲಿ ಪಕ್ಷಪಾತವಿಲ್ಲ.
12 ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
13 (ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
14 ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
15 ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
16 ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
17 ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
18 ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
19 ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ
20 ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
21 ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
22 ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
23 ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
24 ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
25 ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
26 ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
27 ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
28 ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
29 ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ಅಧ್ಯಾಯ 3

1 ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?
2 ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
3 ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
4 ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
5 ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
6 ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
7 ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?
8 (ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
9 ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
10 ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
11 ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
12 ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
13 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
14 ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.
15 ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.
16 ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.
17 ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;
18 ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
19 ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
20 ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
21 ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
22 ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
23 ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
24 ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
25 ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
26 ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
27 ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
28 ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
29 ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
30 ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.
31 ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
ಅಧ್ಯಾಯ 4

1 ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
2 ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
3 ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
4 ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
5 ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
6 ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
7 ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
8 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
9 ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
10 ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
11 ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
12 ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
13 ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
14 ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
15 ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
16 ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
17 (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
18 ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
19 ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
21 ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
22 ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
23 ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
24 ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.
25 ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. 
ಅಧ್ಯಾಯ 5

1 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
2 ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
4 ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
5 ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
6 ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
7 ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
8 ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
9 ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
10 ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
11 ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
12 ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
13 (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
14 ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
15 ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
16 ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
17 ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
18 ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
19 ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
20 ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
21 ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಅಧ್ಯಾಯ 6

1 ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
2 ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
3 ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
4 ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
5 ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
6 ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
7 ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.
8 ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
9 ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
10 ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
11 ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
12 ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
13 ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
14 ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
15 ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.
16 ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
17 ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
18 ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
19 ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
20 ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.
21 ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
22 ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.
23 ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಅಧ್ಯಾಯ 7

1 ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?
2 ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
3 ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
4 ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
5 ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
6 ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
7 ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
8 ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
9 ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
10 ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
11 ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
12 ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
13 ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
14 ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
15 ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
16 ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
17 ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
18 ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
19 ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ.
20 ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
20 ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
21 ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
22 ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
23 ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
24 ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?
25 ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
ಅಧ್ಯಾಯ 8

1 ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
2 ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
3 ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
4 ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
5 ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
6 ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
7 ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
8 ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
9 ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
10 ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
11 ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
12 ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
13 ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
14 ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
15 ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
16 ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
17 ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
18 ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
19 ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
20 ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
21 ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
22 ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
23 ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
24 ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
25 ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
26 ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
27 ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
28 ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
29 ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
30 ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
31 ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
32 ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
33 ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
35 ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
36 ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
37 ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
38 ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ
39 ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
ಅಧ್ಯಾಯ 9

1 ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
2 ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
3 ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
4 ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
5 ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್‌.
6 ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
7 ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
8 ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
9 ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
10 ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
11 (ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
12 ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
13 ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
14 ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
15 ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
16 ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
17 ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
18 ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
19 ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
20 ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
21 ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
22 ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
23 ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
24 ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
25 ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
26 ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
27 ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
28 ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
29 ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
30 ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
31 ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
32 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.
33 ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಅಧ್ಯಾಯ 10

1 ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
2 ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
3 ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
4 ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
5 ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
6 ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
7 ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.
8 ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
9 ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
10 ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
11 ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
12 ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
13 ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
14 ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
15 ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
16 ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
17 ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
18 ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
19 ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.
21 ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ಅಧ್ಯಾಯ 11

1 ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
2 ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
3 ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
4 ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
5 ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
6 ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
7 ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
8 (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
9 ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
10 ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
11 ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
12 ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
13 ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
14 ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
15 ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
16 ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
17 ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
18 ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
19 ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ.
20 ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
21 ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ.
22 ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
23 ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
24 ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
25 ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
26 ಹೀಗೆ ಇಸ್ರಾಯೇಲ್‌ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
27 ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
28 ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
29 ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
30 ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
31 ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
32 ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
33 ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
34 ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
35 ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?
36 ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್‌.
ಅಧ್ಯಾಯ 12

1 ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
2 ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
3 ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
4 ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
5 ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
6 ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
7 ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
8 ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
9 ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
10 ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
11 ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
12 ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
13 ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
14 ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
15 ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
16 ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
17 ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
18 ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
19 ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
20 ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.
21 ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
ಅಧ್ಯಾಯ 13

1 ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
2 ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
3 ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
7 ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
9 ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
10 ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
11 ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
12 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
13 ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
14 ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಅಧ್ಯಾಯ 14

1 ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
2 ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
3 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
5 ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
6 ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
7 ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
8 ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
9 ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
10 ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
11 ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
12 ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
13 ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
14 ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
15 ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
16 ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
17 ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
18 ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
19 ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
20 ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
21 ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
22 ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.
23 ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
ಅಧ್ಯಾಯ 15

1 ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
2 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
3 ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
4 ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
5 ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
6 ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
7 ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
8 ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
9 ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
10 ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
11 ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
12 ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
13 ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
14 ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
15 ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
16 ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
17 ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
18 ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
19 ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
20 ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
21 ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
22 ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.
23 ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
24 ನಾನು ಸ್ಪೇನ್‌ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
25 ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
26 ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
27 ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
28 ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
29 ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.
30 ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
31 ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
32 ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.
33 ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್‌.
ಅಧ್ಯಾಯ 16

1 ​ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
2 ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
3 ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
4 ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
5 ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
6 ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
7 ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
8 ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
9 ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
10 ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
11 ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು.
12 ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
13 ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು.
14 ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.
15 ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
16 ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
17 ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
18 ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
19 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
20 ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
21 ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
22 ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
23 ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
24 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.
25 ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
26 ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.
27 ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.